Index   ವಚನ - 122    Search  
 
ಅಂಥ ಬ್ರಹ್ಮಾಂಡವ ಇಪ್ಪತ್ತೊಂದುಲಕ್ಷದ ಮೇಲೆ ಸಾವಿರದಿನ್ನೂರಾಯೆಂಟು ಬ್ರಹ್ಮಾಂಡವನೊಳಕೊಂಡುದೊಂದು ಭದ್ರಕಾಳವೆಂಬ ಭುವನ. ಆ ಭುವನದೊಳು ಮಹಾಕಾಳನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಆರುನೂರುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಆರುನೂರುಕೋಟಿ ಇಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.