Index   ವಚನ - 128    Search  
 
ಅಂಥ ಬ್ರಹ್ಮಾಂಡವ ಇಪ್ಪತ್ತೇಳುಲಕ್ಷದ ಮೇಲೆ ಸಾವಿರದಿನ್ನೂರಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ತ್ರಿದಶೇಶ್ವರವೆಂಬ ಭುವನ. ಆ ಭುವನದೊಳು ಶತಾಕ್ಷನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಆರುನೂರಾ ಮೂವತ್ತುಕೋಟಿ ವೇದ ಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.