Index   ವಚನ - 138    Search  
 
ಅಂಥ ಬ್ರಹ್ಮಾಂಡವ ಮೂವತ್ತೇಳುಲಕ್ಷದ ಮೇಲೆ ಸಾವಿರದ ಮುನ್ನೂರಾ ಅರವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಗ್ರಸನವೆಂಬ ಭುವನ. ಆ ಭುವನದೊಳು ಸರ್ವಗ್ರಾಸನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಆರುನೂರೆಂಬತ್ತುಕೋಟಿ ದೇವರ್ಕಳು ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ನೋಡಾ ಆರುನೂರೆಂಬತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.