Index   ವಚನ - 155    Search  
 
ಅಂಥ ಬ್ರಹ್ಮಾಂಡವ ಐವತ್ತುನಾಲ್ಕುಲಕ್ಷದ ಮೇಲೆ ಸಾವಿರ ಐನೂರಾ ಮೂವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಶ್ರೀಧರವೆಂಬ ಭುವನ. ಆ ಭುವನದೊಳು ಅನಂತಗುಣರೂಪನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಏಳುನೂರಾ ಅರವತ್ತೈದುಕೋಟಿ ಬ್ರಹ್ಮ-ನಾರಾಯಣ-ರುದ್ರರಿಹರು. ಏಳುನೂರಾ ಅರವತ್ತೈದುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.