Index   ವಚನ - 172    Search  
 
ಅಂಥ ಬ್ರಹ್ಮಾಂಡವ ಎಪ್ಪತ್ತೊಂದು ಲಕ್ಷದ ಮೇಲೆ ಸಾವಿರದಾ ಏಳುನೂರೆಂಟು ಬ್ರಹ್ಮಾಂಡವನೊಳಕೊಂಡುದೊಂದು ಮೇಘನಾದವೆಂಬ ಭುವನ. ಆ ಭುವನದೊಳು ಮೇಘವಾಹನನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಟುನೂರೈವತ್ತುಕೋಟಿ ವೇದಪುರುಷರು ಮುನೀಂದ್ರರು ಇಂದ್ರ ಚಂದ್ರಾದಿತ್ಯರು ದೇವರ್ಕಳಿಹರು ನೋಡಾ. ಎಂಟನೂರೈವತ್ತುಕೋಟಿ ಬ್ರಹ್ಮ-ನಾರಾಯಣ-ರುದ್ರರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.