Index   ವಚನ - 174    Search  
 
ಅಂಥ ಬ್ರಹ್ಮಾಂಡವ ಎಪ್ಪತ್ಮೂರುಲಕ್ಷದ ಮೇಲೆ ಸಾವಿರದೇಳುನೂರಾ ಇಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ದೀರ್ಘಬಾಹುವೆಂಬ ಭುವನ. ಆ ಭುವನದೊಳು ಘಂಟಾಕರ್ಣನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಟುನೂರಾ ಅರುವತ್ತುಕೋಟಿ ಬ್ರಹ್ಮ-ನಾರಾಯಣ-ರುದ್ರರಿಹರು. ಎಂಟುನೂರಾ ಅರುವತ್ತುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.