ಅಂಥ ಬ್ರಹ್ಮಾಂಡವ ಎಂಬತ್ತೊಂದುಲಕ್ಷದ ಮೇಲೆ
ಸಾವಿರದೆಂಟುನೂರಾ ಎಂಟು
ಬ್ರಹ್ಮಾಂಡವನೊಳಕೊಂಡುದೊಂದು ದೌಷ್ಟ್ರೇಯವೆಂಬ ಭುವನ.
ಆ ಭುವನದೊಳು ಭುವನೇಶ್ವರನೆಂಬ ರುದ್ರಮೂರ್ತಿ ಇಹನು.
ಆ ರುದ್ರಮೂರ್ತಿಯ ಓಲಗದಲ್ಲಿ
ಒಂಬತ್ತುನೂರುಕೋಟಿ ರುದ್ರ ಬ್ರಹ್ಮ ನಾರಾಯಣರಿಹರು.
ಒಂಬತ್ತುನೂರುಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು
ದೇವರ್ಕಳಿಹರು ನೋಡಾ
ಅಪ್ರಮಾಣಕೂಡಲಸಂಗಮದೇವಾ.