Index   ವಚನ - 199    Search  
 
ಅಂಥ ಬ್ರಹ್ಮಾಂಡವ ತೊಂಬತ್ತೆಂಟು ಲಕ್ಷದ ಮೇಲೆ ಸಾವಿರದಾ ಒಂಬಯಿನೂರಾ ಎಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಭಸ್ಮಾಂತಕವೆಂಬ ಭುವನ. ಆ ಭುವನದೊಳು ದೇವದೇವನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬತ್ತುನೂರಾ ಎಂಬತ್ತೈದು ಕೋಟಿ ಬ್ರಹ್ಮ-ನಾರಾಯಣ-ರುದ್ರರಿಹರು. ಒಂಬತ್ತುನೂರಾ ಎಂಬತ್ತೈದು ಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.