Index   ವಚನ - 213    Search  
 
ಅಂಥ ಬ್ರಹ್ಮಾಂಡವ ನಾಲ್ವತ್ತು ಕೋಟಿಯ ಮೇಲೆ ಮೂರುಸಾವಿರದಾ ಹದಿನೆಂಟು ಬ್ರಹ್ಮಾಂಡವನೊಳಕೊಂಡುದೊಂದು ಪ್ರಮರ್ಧವೆಂಬ ಭುವನ. ಆ ಭುವನದೊಳು ಜ್ಯೋತಿಪ್ರಕಾಶನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಸಾವಿರಕೋಟಿಯ ಮೇಲೆ ಮೂನ್ನೂರುಕೋಟಿ ರುದ್ರ ಬ್ರಹ್ಮ ನಾರಾಯಣರಿಹರು. ಸಾವಿರಕೋಟಿಯ ಮೇಲೆ ಮೂನ್ನೂರು ಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ. ಅಪ್ರಮಾಣಕೂಡಲಸಂಗಮದೇವಾ.