Index   ವಚನ - 269    Search  
 
ಇನ್ನು ಆ ಆತ್ಮನು ಪೃಥ್ವಿ ಅಪ್ಪು ತೇಜ ವಾಯು ಆಕಾಶವೆಂಬ ಪಂಚಭೂತಂಗಳಂ ಪಂಚಭೂತಾಂಶಿಕಮಂ ಕೂಡಿಕೊಂಡು ದೇಹವಾಗಿ ಬೆಳೆದು, ಆಧ್ಯಾತ್ಮಿಕ, ಆಧಿದೈವಿಕ, ಆಧಿಭೌತಿಕವೆಂಬ ತಾಪತ್ರಯಂಗಳಿಂದ ನೊಂದು ಬೆಂದು ಪುಣ್ಯಪಾಪ ವಶದಿಂದ ಜೀವನಾಗಿ, ಅಂಡಜ, ಸ್ವೇದಜ, ಉದ್ಬಿಜ, ಜರಾಯುಜವೆಂಬ ಚೌರಾಶಿಲಕ್ಷ ಜೀವಜಂತುಗಳ ಯೋನಿಯಲ್ಲಿ ಬಂದು, ಹುಟ್ಟದ ಯೋನಿಯಿಲ್ಲ, ಮೆಟ್ಟದ ಭೂಮಿಯಿಲ್ಲ, ಉಣ್ಣದ ಆಹಾರವಿಲ್ಲ, ಕಾಣದ ಸುಖದುಃಖವಿಲ್ಲ. ಇದಕ್ಕೆ ಈಶ್ವರ ಉವಾಚ: ನಾನಾಯೋನಿಸಹಸ್ರಾಣಿ ಗತ್ವಾ ಚೈವಂತು ಮಾಯಯಾ | ಆಹಾರಂ ವಿವಿಧಂ ಭುಕ್ತ್ವಾ ಪೀತ್ವಾ ಚ ವಿವಿಧಸ್ತನಾನ್ ||'' ಇಂತೆಂದುದಾಗಿ, ಅಪ್ರಮಾಣಕೂಡಲಂಸಗಮದೇವಾ.