Index   ವಚನ - 299    Search  
 
ಆ ಅನಾಹತಚಕ್ರದ ದ್ವಾದಶದಳದ ಪದ್ಮವ ಪೊಕ್ಕು ಸಾಧಿಸಿ, ಅಲ್ಲಿಹ ಮಂತ್ರ-ಪದ-ವರ್ಣ-ಭುವನ-ತತ್ವ-ಕಲೆಗಳಂ ಕಂಡು, ಅಲ್ಲಿ ಕುಂಕುಮವರ್ಣವಾಗಿಹ ಜ್ಯೋತಿರ್ಮಯಲಿಂಗಮಂ ಬೆರಸಿ, ಅಗ್ನಿಯ ಪಟುಮಾಡಿ,ಮನ ಪವನ ಬಿಂದು ಸಂಯೋಗದಿಂದ ವಿಶುದ್ಧಿಚಕ್ರದ ಷೋಡಶದಳದ ಪದ್ಮವ ಹೊಕ್ಕನು ನೋಡಾ ಅಪ್ರಮಾಣಕೂಡಲಸಂಗಮದೇವಾ.