Index   ವಚನ - 378    Search  
 
ಏನೂ ಏನೂ ಎನಲಿಲ್ಲದಂದು ಮಹಾಘನಕ್ಕೆ ಘನವಾದ ಮಹಾಘನ ನಿರಂಜನಾತೀತಪ್ರಣವದ ನೆನಹು ಮಾತ್ರದಲ್ಲಿ ನಿರಂಜನಪ್ರಣವ ಉತ್ಪತ್ಯವಾಯಿತ್ತು. ಆ ನಿರಂಜನಪ್ರಣವದ ನಿರ್ದೇಶ ಸ್ಥಲದ ವಚನವೆಂತೆಂದಡೆ: ಅವಾಚ್ಯಪ್ರಣವ ಕಲಾಪ್ರಣವ ಉತ್ಪತ್ಯವಾಗದತ್ತತ್ತ, ಪ್ರಣವನಾದ ಪ್ರಣವಬಿಂದು ಪ್ರಣವಕಲೆಗಳುತ್ಪತ್ಯವಾಗದತ್ತತ್ತ, ನಿರಂಜನಪ್ರಣವವಾಗಿದ್ದನಯ್ಯ ಇಲ್ಲದಂತೆ ನಮ್ಮ ಅಪ್ರಮಾಣಕೂಡಲಸಂಗಮದೇವ.