Index   ವಚನ - 535    Search  
 
ಇನ್ನು ಮಹೇಶ್ವರನಲ್ಲಿಯ ಷಡ್ವಿಧ ಷಡುಸ್ಥಲಲಿಂಗ ಮಿಶ್ರಾರ್ಪಣವೆಂತೆಂದಡೆ: ಅಪ್ಪುವೆ ಅಂಗವಾದ ಮಾಹೇಶ್ವರನು ಸುಬುದ್ಧಿಯೆಂಬ ಹಸ್ತದಲ್ಲಿ ಗುರುಲಿಂಗಕ್ಕೆ ಜಿಹ್ವೆಯೆಂಬ ಮುಖದಲ್ಲಿ ಓಗರಾದುರು ಚಿದ್ರವ್ಯವ ಸಮರ್ಪಣವಂ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.