Index   ವಚನ - 559    Search  
 
ಇನ್ನು ಆ ಐಕ್ಯನಲ್ಲಿಯ ಷಡ್ವಿಧ ಷಡುಸ್ಥಲಲಿಂಗ ಮಿಶ್ರಾರ್ಪಣ ಭೇದವೆಂತೆಂದಡೆ: ಆತ್ಮನೇ ಅಂಗವಾದ ಐಕ್ಯಂಗೆ ಭಾವವೆಂಬ ಹಸ್ತದಲ್ಲಿ ಮಹಾಲಿಂಗಕ್ಕೆ ಮನವೆಂಬ ಮುಖದಲ್ಲಿ ಪರಿಣಾಮದ್ರವ್ಯವನು ಸಮರ್ಪಣವಂ ಮಾಡಿ ತೃಪ್ತಿಯನೇ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.