Index   ವಚನ - 627    Search  
 
ಪಾಯು ಗುಹ್ಯ ಪಾದ ಪಾಣಿ ವಾಕ್ ಅಂತರ ಈ ಆರು ಕರ್ಮಾಂಗವು ಕ್ರಿಯಾಶಕ್ತಿಯೇ ಕಾರಣವಾಗಿ ಹುಟ್ಟಿತ್ತು ನೋಡಾ. ಇದಕ್ಕೆ ಮಹಾವಾತುಲಾಗಮೇ: ಪಾಯುಶ್ಚ ಗುಹ್ಯಪಾದಾಶ್ಚ ಹಸ್ತಂ ವಾಗಂತರಂ ತಥಾ | ಷಟ್ಕರ್ಮಾಂಗಮಿದಂ ಪ್ರೋಕ್ತಂ ಕ್ರಿಯಾಶಕ್ತಿಸ್ತು ಕಾರಣಂ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.