Index   ವಚನ - 714    Search  
 
ಅಖಂಡ ಜ್ಯೋತಿರ್ಮಯವಾಗಿಹ ಗೋಳಕಾಕಾರ ಪ್ರಣವದ ಜ್ಯೋತಿಸ್ವರೂಪದಲ್ಲಿ ಹೃದಯಮಂತ್ರವಡಗಿತ್ತು. ಆ ಪ್ರಣವದ ದರ್ಪಣಾಕಾರದಲ್ಲಿ ಶಿರೋಮಂತ್ರವಡಗಿತ್ತು. ಆ ಪ್ರಣವದ ಅರ್ಧಚಂದ್ರಕದಲ್ಲಿ ಶಿಖಾಮಂತ್ರವಡಗಿತ್ತು. ಆ ಪ್ರಣವದ ಕುಂಡಲಾಕಾರದಲ್ಲಿ ಕವಚಮಂತ್ರವಡಗಿತ್ತು. ಆ ಪ್ರಣವದ ದಂಡಸ್ವರೂಪದಲ್ಲಿ ನೇತ್ರಮಂತ್ರವಡಗಿತ್ತು. ಆ ಪ್ರಣವದ ತಾರಕಸ್ವರೂಪದಲ್ಲಿ ಅಸ್ತ್ರಮಂತ್ರವಡಗಿತ್ತು ನೋಡಾ, ಅಪ್ರಮಾಣಕೂಡಲಸಂಗಮದೇವಾ.