Index   ವಚನ - 907    Search  
 
ಏನು ಏನೂ ಎನಲಿಲ್ಲದ ಮಹಾಘನ ನಿರಂಜನಾತೀತದ ನೆನಹುಮಾತ್ರದಲ್ಲಿಯೆ ನವಪದ್ಮ ನವಶಕ್ತಿಗಳುತ್ಪತ್ಯ ಲಯವು. ನಿಶ್ಶಬ್ದವೆಂಬ ಪರಬ್ರಹ್ಮದ ನೆನಹುಮಾತ್ರದಲ್ಲಿಯೆ ಏಕಾಕ್ಷರ ತ್ರಯಾಕ್ಷರ ಸಹಸ್ರಾಕ್ಷರ ಅಷ್ಟನಾದ ಉತ್ಪತ್ಯ ಲಯವು. ದಶಚಕ್ರ ಮೊದಲಾಗಿ, ಚತುರ್ವೇದ ಗಾಯತ್ರಿ ಅಜಪೆ ಕಡೆಯಾಗಿ, ಸಮಸ್ತವು ಅಖಂಡಜ್ಯೋತಿರ್ಮಯವಾಗಿಹ ಗೋಳಕಾಕಾರಪ್ರಣವದಲ್ಲಿ ಉತ್ಪತ್ಯ ಲಯವೆಂದು ಬೋಧಿಸಿ ಕೃತಾರ್ಥನ ಮಾಡಿದ ಮಹಾಗುರುವಿನ ಶ್ರೀಪಾದಕ್ಕೆ ನಮೋ ನಮೋ ಎಂದು ಬದುಕಿದೆನು ಕಾಣಾ, ಅಪ್ರಮಾಣಕೂಡಲಸಂಗಮದೇವಾ.