Index   ವಚನ - 12    Search  
 
ಅಂಥ ಬ್ರಹ್ಮಾಂಡವ ಹತ್ತು ಸಾವಿರದ ತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಶಾಂತ್ಯತೀತೆಯೆಂಬ ಭುವನ. ಆ ಭುವನದೊಳು ದ್ವಿಪಾದನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಐವತ್ತುಕೋಟಿ ಬ್ರಹ್ಮ ನಾರಾಯಣ ರುದ್ರರು, ಐವತ್ತುಕೋಟಿ ವೇದಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರು, ನಾಲ್ವತ್ತೆ ಮೂರುಕೋಟಿ ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.