Index   ವಚನ - 23    Search  
 
ಅಂಥ ಬ್ರಹ್ಮಾಂಡವ ಇಪ್ಪತ್ತೊಂದುಸಾವಿರದ ಇನ್ನೂರಾ ಎಂಟು ಬ್ರಹ್ಮಾಂಡವನೊಳಕೊಂಡುದೊಂದು ಶಿವೋತ್ತಮವೆಂಬ ಭುವನ ಆ ಭುವನದೊಳು ಶಿವಾನಂದನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾ ಐದುಕೋಟಿ ಬ್ರಹ್ಮ ನಾರಾಯಣ ರುದ್ರರು, ಇಂದ್ರಚಂದ್ರಾದಿತ್ಯರು, ನೂರಾ ಐದುಕೋಟಿ ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.