Index   ವಚನ - 41    Search  
 
ಅಂಥ ಬ್ರಹ್ಮಾಂಡವ ಮೂವತ್ತೊಂಬತ್ತುಸಾವಿರದ ಮುನ್ನೂರಾ ಎಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಮಹಾಭುವನ. ಆ ಭುವನದೊಳು ಮಹಾದೇವನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾತೊಂಬತ್ತೈದುಕೋಟಿ ಮುನೀಂದ್ರರು, ದೇವರ್ಕಳು, ವೇದಪುರುಷರು, ನೂರಾತೊಂಬತ್ತೈದುಕೋಟಿ ರುದ್ರ-ಬ್ರಹ್ಮ-ನಾರಾಯಣರು, ಇಂದ್ರಚಂದ್ರಾದಿತ್ಯರು ಇಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.