Index   ವಚನ - 45    Search  
 
ಅಂಥ ಬ್ರಹ್ಮಾಂಡವ ನಾಲ್ವತ್ತುಮೂರುಸಾವಿರದ ನಾನೂರಾ ಇಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಉದ್ಭವವೆಂಬ ಭುವನ. ಆ ಭುವನದೊಳು ಅಜಹರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಇನ್ನೂರಾಹದಿನೈದುಕೋಟಿ ಬ್ರಹ್ಮ ನಾರಾಯಣ ರುದ್ರರಿಹರು, ಇನ್ನೂರಾ ಹದಿನೈದುಕೋಟಿ ಇಂದ್ರ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು, ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.