Index   ವಚನ - 68    Search  
 
ಅಂಥ ಬ್ರಹ್ಮಾಂಡವ ಅರವತ್ತಾರುಸಾವಿರದ ಆರುನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಭೌಮವೆಂಬ ಭುವನ. ಆ ಭುವನದೊಳು ಭುವನಾಧಿಪತಿಯೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರಾ ಮೂವತ್ತುಕೋಟಿ ಇಂದ್ರಚಂದ್ರಾದಿತ್ಯರು, ವೇದಪುರುಷರು ಮುನೀಂದ್ರರಿಹರು ನೋಡಾ. ಮುನ್ನೂರಾ ಮೂವತ್ತುಕೋಟಿ ರುದ್ರ ಬ್ರಹ್ಮ ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.