Index   ವಚನ - 82    Search  
 
ಅಂಥ ಬ್ರಹ್ಮಾಂಡವ ಎಂಬತ್ತುಸಾವಿರದಾ ಏಳುನೂರಾ ತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಪೈಶಾಚಿಕವೆಂಬ ಭುವನ. ಆ ಭುವನದೊಳು ವಾಮದೇವನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿ ಓಲಗದಲ್ಲಿ ನಾನೂರುಕೋಟಿ ನಾರಾಯಣ-ಬ್ರಹ್ಮ-ರುದ್ರಾದಿಗಳಿಹರು ನೋಡಾ. ನಾನೂರುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.