Index   ವಚನ - 90    Search  
 
ಅಂಥ ಬ್ರಹ್ಮಾಂಡವ ಎಂಬತ್ತೆಂಟುಸಾವಿರದ ಎಂಟುನೂರಾ ಎಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಛಂಗವೆಂಬ ಭುವನ. ಆ ಭುವನದೊಳು ಚಕ್ರೇಶ್ವರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನಾನೂರಾ ನಲವತ್ತುಕೋಟಿ ವೇದಪುರುಷರು ಮುನೀಂದ್ರರು ಇಂದ್ರ-ಚಂದ್ರಾದಿತ್ಯರು ದೇವರ್ಕಳಿಹರು ನೋಡಾ. ನಾನೂರಾ ನಲವತ್ತುಕೋಟಿ ಬ್ರಹ್ಮ-ರುದ್ರ-ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.