ಎಲ್ಲರ ಪರಿಯಲ್ಲ ಎನ್ನ ಊಳಿಗ,
ಬಸವಣ್ಣ ಚೆನ್ನಬಸವಣ್ಣ ಕೊಟ್ಟ ಕಾಯಕ
ಸತ್ಕ್ರೀಯೆಂಬ ಅರಸಿಯ ಅಪಮಾನಕ್ಕೆ,
ಲೌಕಿಕಕ್ಕೆ, ಬೊಕ್ಕಸದ ಭಂಡಾರಕ್ಕೆ.
ಈ ವರ್ತಕ ಶುದ್ಧವಾದ ಮತ್ತೆ
ಒಳಗಣ ಮುತ್ತು, ಬೆಳಗುವ ರತ್ನ, ಥಳಥಳಿಸುವ ವಜ್ರ.
ಈ ಕಾಯಕದ ಹೊಲಬ ಕೊಟ್ಟ ಮತ್ತೆ ಕಳವಿನಿಸಿಲ್ಲದಿರಬೇಕು,
ಬಸವಣ್ಣಪ್ರಿಯ ನಾಗರೇಶ್ವರಲಿಂಗವನರಿಯಬಲ್ಲಡೆ.