Index   ವಚನ - 7    Search  
 
ಗುರುವಾದಡೆ ಭೃತ್ಯರ ಚಿತ್ತವವನರಿಯಬೇಕು, ಲಿಂಗವಾದಡೆ ಅರ್ಚಕನ ಚಿತ್ತದಲ್ಲಿ ಅಚ್ಚೊತ್ತಿದಂತಿರಬೇಕು. ಜಂಗಮವಾದಡೆ ಉತ್ಪತ್ತಿ ಸ್ಥಿತಿ ಲಯದ ಗೊತ್ತ ಮೆಟ್ಟದೆ ನಿಶ್ಚಿಂತನಾಗಿರಬೇಕು. ಇಂತೀ ತ್ರಿವಿಧಲಿಂಗ ತ್ರಿವಿಧಾರ್ಪಣಕ್ಕೆ ಒಳಗಾಗಿ, ತ್ರಿವಿಧಾಂಗ ತ್ರಿವಿಧಾರ್ಪಣಕ್ಕೆ ಒಳಗಾಗಿ, ತ್ರಿವಿಧಾಂಗ ತ್ರಿವಿಧಮಲಕ್ಕೆ ಹೊರಗಾಗಿ, ತ್ರಿವಿಧಾತ್ಮ ತ್ರಿವಿಧ ಅರಿವಿನಲ್ಲಿ ಕರಿಗೊಂಡು, ವಿಶ್ವಾಸಕ್ಕೆ ಎಡದೆರಪಿಲ್ಲದೆ ತನ್ಮಯಮೂರ್ತಿ ತಾನಾದ ನಿಜೈಕ್ಯಂಗೆ ರಾಗ ವಿರಾಗವಿಲ್ಲ, ಪುಣ್ಯ ಪಾಪವಿಲ್ಲ, ಕರ್ಮ ನಿ:ಕರ್ಮವಿಲ್ಲ. ಇಂತೀ ಭಿನ್ನಭಾವನಲ್ಲ, ಬಸವಣ್ಣಪ್ರಿಯ ನಾಗರೇಶ್ವರಲಿಂಗವನರಿದ ಶರಣ.