Index   ವಚನ - 9    Search  
 
ನಾನಾ ಬಹುವರ್ಣದ ಬೊಕ್ಕಸದ ಹೊತ್ತು ಮಾಡುವಲ್ಲಿ, ಭಾವದ ಬಹುಚಿತ್ತವನರಿಯಬೇಕು. ನಾನಾ ವರ್ಣದ ಆಭರಣ, ಹದಿನೆಂಟು ಆಶ್ರಯಂಗಳ ತೊಡುವಲ್ಲಿ ದ್ರವ್ಯವ ಕೊಡುವಲ್ಲಿ ಇಂದ್ರಿಯಾತ್ಮನ ಬೆಂಬಳಿಯನರಿಯಬೇಕು. ಎಂಟುರತ್ನದ ಕಾಂತಿ, ಜೀವರತ್ನದ ಕಳೆ ಭಾವಿಸಿ ಏಕವ ಮಾಡಿ ನಡೆವುದು. ನೀವು ಕೊಟ್ಟ ಕಾಯಕ ತನುವಿಂಗೆ ಕ್ರೀ, ಆತ್ಮಂಗೆ ಅರಿವು. ಆ ಅರಿವಿಂಗೆ ಮಹಾಬೆಳಕು ಒಡಗೂಡಿ ಕರಿಗೊಂಡಲ್ಲಿ ಬೊಕ್ಕಸದ ಮಣಿಹವನೊಪ್ಪಿಸಬೇಕು, ಬಸವಣ್ಣಪ್ರಿಯ ನಾಗರೇಶ್ವರಲಿಂಗಕ್ಕೆ.