Index   ವಚನ - 10    Search  
 
ಶೀತವುಳ್ಳನ್ನಕ್ಕ ಉಷ್ಣವ ಪ್ರತಿಪಾದಿಸಬೇಕು. ಉಷ್ಣವುಳ್ಳನಕ್ಕ ಶೀತವ ಪ್ರತಿಪಾದಿಸಬೇಕು. ದಿವದಲ್ಲಿ ಎದ್ದು, ರಾತ್ರಿಯಲ್ಲಿ ಒರಗುವನ್ನಕ್ಕರ ಅದ್ವೈತ ಅಸತ್ಯ ನೋಡಾ. ಇದು ಕಾರಣ, ಕ್ರಿಯೆ ಮರೆಯಲಿಲ್ಲ, ಅರಿವು ಶೂನ್ಯವೆಂದು ಬಿಡಲಿಲ್ಲ. ಅದು ಶಿಲೆಯ ಮರೆಯ ಪಾವಕ, ತಿಲದೊಳಗಣ ತೈಲ. ಅವರ ಒಲವರದಲ್ಲಿ ಕುಲವ ಕಾಣಬೇಕು, ಬಸವಣ್ಣಪ್ರಿಯ ನಾಗರೇಶ್ವರಲಿಂಗವನರಿವುದಕ್ಕೆ.