Index   ವಚನ - 2    Search  
 
ಅಂಗದ ಆಪ್ಯಾಯನಕ್ಕೆ ಲಿಂಗವ ಮರೆದು ತಿರುಗುವ ಭಂಡಭವಿಗಳನೇನೆಂಬೆನಯ್ಯಾ? ಲಿಂಗದಲ್ಲಿ ನಿತ್ಯರಲ್ಲ; ಜಂಗಮದಲ್ಲಿ ಪ್ರೇಮಿಗಳಲ್ಲ; ಹಿಡಿದ ಛಲದಲ್ಲಿ ಕಡುಗಲಿಗಳಲ್ಲ. ಮೃಡನ ಕಂಡೆಹೆನೆಂಬ ಮೂರ್ಖರ ಮುಖವ ನೋಡಲಾಗದು; ಅವರಡಿಯ ಮೆಟ್ಟಲಾಗದು ಕಾಣಾ ಅಮುಗೇಶ್ವರಾ.