Index   ವಚನ - 53    Search  
 
ಗುರುವಿನಡಿಗೆರಗೆನೆಂಬ ಭಾಷೆ ಎನಗೆ. ಲಿಂಗವ ಪೂಜಿಸಿ ವರವ ಬೇಡೆನೆಂಬ ಭಾಷೆ ಎನಗೆ. ಜಡೆಮುಡಿಯುಳ್ಳ ನಿಜಜಂಗಮವ ಕಂಡು ಅಡಿಗೆರಗದ ಭಾಷೆ ಎನಗೆ. ಹಿಡಿದ ಛಲವ ಬಿಡದೆ ನಡೆಸಿ ಮೃಡನ ಪಡೆದೆಹೆನೆಂಬ ಭಾಷೆ ಎನಗೆ. ಕಡುಗಲಿಯಾಗಿ ಆಚರಿಸಿ ಜಡಿದೆನು ಅಜ್ಞಾನಿಗಳ ಬಾಯ ಕೆರಹಿನಲ್ಲಿ. ಮಾತಿನಲ್ಲಿ ವೇಷಧಾರಿಗಳು ಮೃಡನ ಅರಿದೆಹೆನೆಂದು ಗಳಹುತಿಪ್ಪರೆ, ಕೆರಹಿನಟ್ಟೆಯಲ್ಲಿ ಹೊಯ್ಯದೆ ಮಾಣ್ಬನೆ ಅರಿವುಳ್ಳ ಘನಮಹಿಮನು? ಅಮುಗೇಶ್ವರನೆಂಬ ಲಿಂಗವ ಅರಿದಿಪ್ಪ ಮಹಾಘನಮಹಿಮನ ನಾನೇನೆಂಬೆನಯ್ಯಾ?