Index   ವಚನ - 87    Search  
 
ಮನಕ್ಕೆ ಬಂದಂತೆ ಹಲವುಪರಿಯ ವೇಷವ ತೊಟ್ಟು ಹರಿದಾಡುವ ಜಾತಿಕಾರರ ಈಶ್ವರನು ಮೆಚ್ಚನು, ಸದಾಶಿವನು ಸೈರಣೆಯ ಮಾಡನು. ಬಸವಾದಿ ಪ್ರಮಥರು ಬನ್ನಿ ಕುಳ್ಳಿರಿ ಎನ್ನರು. ಅಮುಗೇಶ್ವರಲಿಂಗವನರಿಯದ ಅನಾಚಾರಿಗಳ ಕಂಡಡೆ ಬನ್ನಿ ಕುಳ್ಳಿರಿ ಎಂಬ ನುಡಿಯ ನುಡಿಯರು.