Index   ವಚನ - 120    Search  
 
ಕಾಮಿಯಾಗಿ ನಿಃಕಾಮಿಯಾದಳು. ಸೀಮೆಯಲ್ಲಿರ್ದು ನಿಸ್ಸೀಮೆಯಾದಳು. ಭವಿಯ ಸಂಗವ ತೊರೆದು ಭವಬಾಧೆಯ ಹರಿದಳು. ಬಸವಣ್ಣನೆ ಗತಿಯೆಂದು ಬರಲು, ನಾನು ಮಡಿಯ ಹಾಸಿ ನಡೆಸಿದೆ. ನಡೆವುದಕ್ಕೆ ಹಾಸಿದ ಮಡಿಯ ಸರ್ವಾಂಗಕ್ಕೆ ಹೊಯ್ದಳು. ಆ ಮಡಿಯ ಬೆಳಗಿನೊಳಗೆ ನಿರ್ವಯಲಾದಳು. ಕಲಿದೇವರದೇವಾ, ಮಹಾದೇವಿಯಕ್ಕಗಳ ನಿಲವ ಬಸವಣ್ಣನಿಂದ ಕಂಡು ಬದುಕಿದೆನಯ್ಯಾ ಪ್ರಭುವೆ.