Index   ವಚನ - 144    Search  
 
ಗುರು ಕೊಟ್ಟ ಲಿಂಗ ತನ್ನ ಕರಸ್ಥಲದಲ್ಲಿರುತಿರಲು, ಧರೆಯ ಮೇಲೆ ಪ್ರತಿಷ್ಠಿಸಿದ ಭವಿಶೈವದೈವ, ತೀರ್ಥಕ್ಷೇತ್ರಂಗಳಿಗೆ ಹರಿದುಹೋಗುವ ಪರವಾದಿಗಳಿಗೆ ಅಘೋರ ನರಕ ತಪ್ಪದೆಂದ, ಕಲಿದೇವಯ್ಯ.