Index   ವಚನ - 150    Search  
 
ಗುರುಮಾರ್ಗಾಚಾರ ಸತ್ಕ್ರಿಯಾಭಕ್ತಿಜ್ಞಾನವೈರಾಗ್ಯ ಷಟ್ಸ್ಥಲಮಾರ್ಗವಿಡಿದು ಆಚರಿಸುವ ಅಚ್ಚಪ್ರಸಾದಿ ನಿಚ್ಚಪ್ರಸಾದಿ ಸಮಯಪ್ರಸಾದಿ ಸ್ವಯಚರಪರಮೂರ್ತಿಗಳು ಮೊದಲಾಗಿ ಲಿಂಗಾರ್ಚನೆಯ ವೇಳೆ ತ್ರಿಕಾಲಂಗಳಲ್ಲಿ ದಂತಪಂಕ್ತಿಚೇತನ ಪರಿಯಂತರ ಮಧುರ ಒಗರು ಖಾರ ಆಮ್ಲ ಕಹಿಯುಕ್ತವಾದ ಕಾಷ್ಠದೊಳಗೆ ಅರ್ಪಿತಕ್ಕೆ ಅಯೋಗ್ಯವಾದುದನುಳಿದು, ಯೋಗ್ಯವಾದ ಕಾಷ್ಠವ ದ್ವಾದಶಾಂಗುಲವಾದಡೂ ಸರಿಯೆ, ಅಷ್ಟಾಂಗುಲವಾದಡೂ ಸರಿಯೆ, ಮೀರಿದಡೆ ಷಡಂಗುಲದಿಂದಾಗಲಿ ದಂತಧಾವನ ಕ್ರಿಯೆಗಳ ಮಾಡುವದು. ದಂತಪಂಕ್ತಿಯ ಚೇತನ ತಪ್ಪಿದಲ್ಲಿ ಪರ್ಣದಿಂದಾಗಲಿ, ಗುರುಪಾದೊದಕಮಿಶ್ರವಾದ ವಿಭೂತಿ ಯಿಂದಲಾ[ಗಲಿ] ದಂತಪಂಙ್ತಿಯ ತೀಡಿ, ಮುಖಸ್ನಾನವ ಮಾಡಿ, ಲಿಂಗಾರ್ಚನೆ ಲಿಂಗಾರ್ಪಣವ ಮಾಡಬೇಕಲ್ಲದೆ ಇಂತು ಗುರುವಾಕ್ಯವ ಮೀರಿ, ಸಂಸಾರಲಂಪಟದಿಂದ ಹಾಂಗೆ ಭುಂಜಿಸುವಾತಂಗೆ ಪ್ರಸಾದಿಸ್ಥಲ ಮೊದಲು, ಪರಸ್ಥಲ ಕಡೆಯಾಗಿ ಪಿಂಡಾದಿ ಜ್ಞಾನಶೂನ್ಯಸ್ಥಲಕ್ಕೆ ಹೊರಗು ನೋಡ, ಕಲಿದೇವರದೇವಾ.