Index   ವಚನ - 172    Search  
 
ತದ್ದುತತುರಿ ಬಾವು ಬಗದಳ ಶೀತ ವಾತ ಬಹುಜ್ವರ ಹೊಟ್ಟೆಬೇನೆ ಕೆಟ್ಟ ಹುಣ್ಣು ಮೈಕುಷ್ಠ ಮೊದಲಾದ ಮುನ್ನೂರರುವತ್ತು ವ್ಯಾಧಿಗಳ, ಶಿವನು ಹರಿಯಬಿಟ್ಟು ನೋಡುವ. ಇವೆಲ್ಲ ಶಿವನ ಕರುಣವಾದಲ್ಲದೆ ಹೋಗವು. ಇದನರಿಯದೆ, ನಾರು ಬೇರ ನಚ್ಚಿದ ಅವಿದ್ಯ ಸಾಧಕರೆಲ್ಲ ಹತವಾಗಿ ಹೋದರಂದೆ. ಇಂತಿದ ವಿಚಾರಿಸಿ ತಿಳಿಯದೆ, ಲೋಕದ ಬುದ್ಧಿಗೇಡಿ ಮನುಜರು, ಸಜ್ಜನಶುದ್ಧಶಿವಾಚಾರಸಂಪನ್ನರಾದ ಜಂಗಮಲಿಂಗದ ಮಾತ ಕೇಳದೆ, ಅದ್ದನ ಜೋಳ, ಅರಪಾವು ಎಣ್ಣೆಯ ಕೊಂಡು, ನೋಟಕಾರ್ತಿಯ ಮನೆಗೆ ಹೋಗಿ, ಅವಳು ಹೇಳಿದ ತಾತುಭೂತದ ಕೋಟಲೆಯ ಕೈಕೊಂಡು ಬಂದು, ಅವಕ್ಕೂಟವನಟ್ಟಿಕ್ಕಿ, ಮಿಕ್ಕಿದ ಕೂಳ ತನ್ನಿಷ್ಟಲಿಂಗಕ್ಕೆ ತೋರಿ ತಿಂಬ, ಲಿಂಗದ್ರೋಹಿಗಳಿಗೆ ಕುಂಭೀಪಾತಕ ನಾಯಕನರಕ, ತಪ್ಪದೆಂದ, ಕಲಿದೇವಯ್ಯ.