Index   ವಚನ - 194    Search  
 
ದೇವನೊಬ್ಬನೆ ಜಗವ ಕಾವಾತ, ಕೊಲುವಾತ. ದೇವರು ಮುನಿದಡೆ ಮರಳಿ ಕಾವವರುಂಟೆ ? ಈ ಸಾವಿಗೊಳಗಾಗಿ ಹೋಹ ಸಮಸ್ತದೈವಂಗಳು, ಮಹಾದೇವನ ಸರಿಯೆಂದು ಆರಾಧಿಸಿ, ಅಚಲಿತಪದವಿಯ ಬೇಡುವ ಈರೇಳುಜಾತಿಗಳಿಗೆ, ಆವಾವ ಕಾಲದಲ್ಲಿ ನರಕ ತಪ್ಪದೆಂದ, ಕಲಿದೇವಯ್ಯ.