Index   ವಚನ - 198    Search  
 
ದ್ವೈತಾದ್ವೈತವೆಂಬ ಉಭಯಕರ್ಮವನತಿಗಳೆದ ಅಂಗಲಿಂಗಸಂಬಂಧವನುಳ್ಳ ನಿಜವೀರಶೈವಸಂಪನ್ನರು, ನಮ್ಮ ಸ್ವಯಾಂಗಲಿಂಗವನರ್ಚಿಸುವಲ್ಲಿ ಭವಿಶೈವ ಭಿನ್ನಕರ್ಮಿಗಳಂತೆ ಬೇರಿಟ್ಟು, ಅರ್ಘ್ಯಪಾದ್ಯ ಆಚಮನವಾದಿಯಾದ ಉಪಪಾತ್ರೆಗಳಲ್ಲಿ ನೀರನೆರೆದು, ಪಂಚಮಶುದ್ಧಿ ಪಂಚಾಮೃತಾಭಿಷೇಕವ ಮಾಡಿ, ತನ್ನ ಲಿಂಗವನರ್ಚಿಸಿ, ಪ್ರಸಾದವ ಕೊಂಡೆನೆಂಬ ಜಡಶೈವ ಭಿನ್ನಕರ್ಮವನುಳ್ಳ ಕುನ್ನಿಗಳು ಎನ್ನ ಲೋಕಕ್ಕೆ ಹೊರಗೆಂದ, ಕಲಿದೇವಯ್ಯ.