Index   ವಚನ - 229    Search  
 
ಪುರವರಾಧೀಶ್ವರರೆಲ್ಲರೂ ಪುರದೊಡೆಯ ಬಸವಣ್ಣ ಎಂದೆಂಬರು. ಅಮರಾಧೀಶ್ವರರೆಲ್ಲರೂ ಅಮರಪತಿ ಬಸವಣ್ಣ ಎಂದೆಂಬರು. ಕೈಲಾಸಾಧಿಪತಿಗಳೆಲ್ಲರೂ ಶಿವಲಿಂಗ ಬಸವಣ್ಣ ಎಂದೆಂಬರು. ದೇವಸಮೂಹವೆಲ್ಲ ಮಹಾಲಿಂಗ ಬಸವಣ್ಣ ಎಂದೆಂಬರು. ಪಂಚವಕ್ತ್ರಗಣಂಗಳೆಲ್ಲರೂ ಪಂಚಲಿಂಗ ಬಸವಣ್ಣ ಎಂದೆಂಬರು. ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯಗಣಂಗಳೆಲ್ಲರೂ ಪದವೀವ ಬಸವಣ್ಣ ಎಂದೆಂಬರು. ನಾಗಲೋಕದವರೆಲ್ಲರೂ ಸಕಲಾಧಾರ ಬಸವಣ್ಣ ಎಂದೆಂಬರು. ಮರ್ತ್ಯಲೋಕದವರೆಲ್ಲರೂ ಗುರುಲಿಂಗ ಬಸವಣ್ಣ ಎಂದೆಂಬರು. ಭಕ್ತ ಬಸವಣ್ಣ ಎಂದೆಂಬರು, ಸೋಹಿ ದಾಸೋಹಿ ಬಸವಣ್ಣ ಎಂದೆಂಬರು. ತನುಮನಧನವ ಗುರುಲಿಂಗಜಂಗಮಕ್ಕೆ ನಿವೇದಿಸುವಾತ ಬಸವಣ್ಣ ಎಂದೆಂಬರು. ಇದು ಕಾರಣ, ನಾನು ಬಸವಣ್ಣ ಬಸವಣ್ಣ ಬಸವಣ್ಣ ಎಂದು ಬಯಲಾದೆನು ಕಾಣಾ, ಕಲಿದೇವರದೇವ.