Index   ವಚನ - 233    Search  
 
ಪೃಥ್ವಿ ಲಿಂಗವೆಂದು ಗತವಾದರು ಹಲಬರು. ಅಪ್ಪು ಲಿಂಗವೆಂದು ತಪ್ಪಿದರು ಶಿವಪಥವ ಹಲಬರು. ತೇಜ ಲಿಂಗವೆಂದು ವಾದಿಗಳಾದರು ಹಲಬರು. ವಾಯು ಲಿಂಗವೆಂದು ಘಾಸಿಯಾದರು ಹಲಬರು. ಆಕಾಶ ಲಿಂಗವೆಂದು ಶೂನ್ಯವಾದಿಗಳಾದರು ಹಲಬರು. ಇಂತೀ ಹುಸಿಶಬ್ದವ ತೊಡೆದು, ನಿಜಲಿಂಗ ನಿಜಜಂಗಮ ನಿತ್ಯಪ್ರಸಾದದ ನಿಜವ ತೋರಿ, ಎನ್ನ ಬದುಕಿಸಿದಾತ ಬಸವಣ್ಣ ಕಾಣಾ, ಕಲಿದೇವಯ್ಯ.