Index   ವಚನ - 288    Search  
 
ವಚನದ ರಚನೆಯ ನುಡಿವ ಬಯಲು ರಂಜಕರೆಲ್ಲ ಭಕ್ತರಪ್ಪರೆ ಅಯ್ಯಾ? ವಚನ ತನ್ನಂತಿರದು, ತಾನು ವಚನದಂತಿರ. ಅದೆಂತೆಂದಡೆ: ತನುಮನಧನವನೆಲ್ಲ ಹಿಂದಿಟ್ಟುಕೊಂಡು, ಮಾತಿನ ಬಣಬೆಯ ಮುಂದಿಟ್ಟುಕೊಂಡು, ಒಡೆಯನ ಕಂಡು ನಾಯಿ ಬಾಲವ ಬಡಿದುಕೊಂಬಂತೆ, ಆ ತೆರನಾಯಿತೆಂದ ಕಲಿದೇವರದೇವಯ್ಯ.