Index   ವಚನ - 305    Search  
 
ಶಿವ ತಾನೀತ ಮರ್ತ್ಯಲೋಕವ ಪಾವನವ ಮಾಡಲು, ಗುರು ತಾನೀತ ಎನ್ನ ಭವರೋಗವ ವೇಧಿಸಲು, ಭಕ್ತ ತಾನೀತ ಎನಗೆ ವಿಸ್ತಾರವಾಗಿ. ಎನಗೆ ಜಂಗಮ ತಾನೀತ ಅನಾದಿ ಸಂಸಿದ್ಧ ಘನಮಹಿಮನಾಗಿ. ಲಿಂಗ ತಾನೀತ ಎನಗೆ ಪ್ರಾಣಲಿಂಗ ತಾನಾಗಿ. ಎನ್ನ ವಿಸ್ತಾರ ತಾನೀತ ಎನ್ನ ನಿಲುಕಡೆಯ ತಾನಾಗಿ. ಎನ್ನ ಸರ್ವಸ್ವಾಯತವ ಮಾಡಿದ ಮಹಿಮ ತಾನೀತ ಕಾಣಾ, ಕಲಿದೇವರದೇವ, ನಿಮ್ಮ ಶರಣ ಬಸವಣ್ಣ.