Index   ವಚನ - 12    Search  
 
ಬಂದು ಬಂದದ್ದರಿಯದೆ, ಹೋಗಿ ಹೋದದ್ದರಿಯದೆ, ಇದ್ದು ಇದ್ದದ್ದರಿಯದೆ, ನೊಂದು ನೊಂದದ್ದರಿಯದೆ, ಕೆಟ್ಟು ಕೆಟ್ಟದ್ದರಿಯದೆ, ಎಂಬತ್ನಾಲ್ಕುಲಕ್ಷ ಜೀವರಾಶಿ, ಯೋನಿದ್ವಾರದಲ್ಲಿ ತಿರುತಿರುಗಿ ಬಂದದ್ದನ್ನರಿಯದೆ, ಏನೂ ಏನರಿಯದ್ಹಾಂಗೆ ಅರಿತು ಅರಿಯದ್ಹಾಂಗೆ ಇರ್ದೆಯಲ್ಲಾ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.