Index   ವಚನ - 25    Search  
 
ಕಾಮಧೇನುವೆಂದಡೆ ಇಹುದಕ್ಕೆ ನೆಲೆ ಬೇಕು, ಕಲ್ಪತರುವೆಂದಡೆ ಹುಟ್ಟೂದಕ್ಕೆ ಭೂಮಿ ಬೇಕು, ಚಿಂತಾಮಣಿಯೆಂದಡೆ ತಾನೊಂದ ಚಿಂತಿಸಿ ಬೇಡಿಯಲ್ಲದೆ ಕೊಡದೊಂದುವ. ಇವಕ್ಕೆಲ್ಲಕ್ಕೂ ಒಂದೊಂದು ನಿಂದ ನೆಲೆ ವಾಸವಾಯಿತ್ತು. ಮನದರಿವಿಂಗೆ, ಕೈಯ ಕುರುಹಿಂಗೆ, ವಿಚಾರದಿಂದ ಒಳಹೊಕ್ಕು ನಿಂದು ನೋಡಲಾಗಿ, ಹಿಂದಳ ಕತ್ತಲೆಯ ಮುಂದಳ ಬೆಳಗಿನ ಉಭಯದ ಸಂಧಿಯಲ್ಲಿ ಸಲೆ ಸಂದು ತೋರುತ್ತದೆ, ನಿಜದ ಬೆಳಗು ತೋರುತ್ತದೆ, ಸದಾಶಿವಮೂರ್ತಿಲಿಂಗದಲ್ಲಿ.