Index   ವಚನ - 26    Search  
 
ಅಂಬರದಲ್ಲಿ ತೋರುವ ಚಾಪದ ಬಹುವರ್ಣದ ಸಂಭ್ರಮ ಕುಂಭಿನಿಯ ಜಲದಲ್ಲಿ ತೋರುತ್ತಿರೆ ಉಭಯದಲ್ಲಿಯೂ ಬಯಲು. ಆ ರಂಜನೆಯಂತೆ ಚಿತ್ತದ ಕಲೆ ಚಿತ್‍ಶಕ್ತಿಯ ಅರಿವು ಮರ್ತ್ಯರಿಗೆ ಅಗೋಚರ. ಚಿತ್ತಜನ ಬಿಲ್ಲನೆತ್ತುವಾತ ಅನಿತ್ಯದ ಗೊತ್ತಿನಲೈದಾನೆ. ನಿತ್ಯದ ಗೊತ್ತ ಮುಟ್ಟಿ, ಉಭಯದ ಗೊತ್ತ ಬಚ್ಚಬಯಲಾಯಿತ್ತು. ಬಯಲ ಬೆಳಗಿನಲ್ಲಿ ಹೊಳಹುದೋರುತ್ತದೆ, ಸದಾಶಿವಮೂರ್ತಿಲಿಂಗದಲ್ಲಿ.