ತ್ರಾಸಿನ ನಾಲಗೆಯಂತೆ ಹೆಚ್ಚು ಕುಂದನೊಳಕೊಳ್ಳದೆ,
ಗುರುಲಿಂಗಜಂಗಮ ತ್ರಿವಿಧಮುಖವು ಒಂದೆಯೆಂದು ಪ್ರಮಾಳಿಸಿ,
ಮಾಡುವ ದ್ರವ್ಯ ಕೇಡಿಲ್ಲದಂತೆ ಮಾಡುವುದು ಸದ್ಭಕ್ತಿಸ್ಥಲ.
ಹೀಗಲ್ಲದೆ ಗುರುವಿನ ಆಢ್ಯಕ್ಕಂಜಿ,
ಜಂಗಮದ ಸಮೂಹದ ವೆಗ್ಗಳವ ಕಂಡು ಅಂಜಿ ಮಾಡಿದಡೆ,
ಭಕ್ತಿಗೂಣೆಯ, ದ್ರವ್ಯದ ಕೇಡು, ಸತ್ಯಕ್ಕೆ ಹೊರಗು,
ಸದಾಶಿವಮೂರ್ತಿಲಿಂಗಕ್ಕೆ ದೂರ.