Index   ವಚನ - 54    Search  
 
ಇಷ್ಟಲಿಂಗ ಪ್ರಾಣಲಿಂಗವೆಂದು ಬೇರೊಂದು ಕಟ್ಟಳೆಯ ಮಾಡಬಹುದೆ ಅಯ್ಯಾ? ಬೀಜವೊಡೆದು ಮೊಳೆ ತಲೆದೋರುವಂತೆ, ಬೀಜಕ್ಕೂ ಅಂಕುರಕ್ಕೂ ಭಿನ್ನವುಂಟೆ ಅಯ್ಯಾ? ಇಷ್ಟದ ಕುರುಹಿನಲ್ಲಿ ಚಿತ್ತ ನಿಂದು ಮಿಕ್ಕ ಗುಣಂಗಳನರಿಯಬೇಕು. ಇದೆ ನಿಶ್ಚಯ, ಸದಾಶಿವಮೂರ್ತಿಲಿಂಗವು ತಾನಾಗಿ.