ಭಕ್ತ ಭೂಮಿಯಾಗಿ, ಜಂಗಮ ಬೀಜವಾಗಿ,
ಆ ಜಂಗಮದರಿವು ಅಪ್ಪುವಾಗಿ,
ಆ ಸುಭೂಮಿಯ ಬೀಜದ ಮೇಲೆ ಸುರಿಯೆ,
ಆ ಭೂಮಿ ಶೈತ್ಯವಾಗಿ,
ಆ ಬೀಜದ ಒಳಗು ಒಡೆದು ಅಂಕುರ ತಲೆದೋರಿ,
ಭಕ್ತಿ ಜ್ಞಾನ ವೈರಾಗ್ಯವೆಂಬ ಮರ ಶಾಖೆ
ಫಲ ಬಲಿದು ತುರೀಯ ನಿಂದು ಹಣ್ಣಾಯಿತ್ತು.
ಆ ಹಣ್ಣ ಮೇಲಣ ಜಡವ ಕಳೆದು ಒಳಗಳ ಬಿತ್ತ
ಮುಂದಕ್ಕೆ ಹುಟ್ಟದಂತೆ ಹಾಕಿ
ಉಭಯದ ಮಧ್ಯದಲ್ಲಿ ನಿಂದ ಸವಿಸಾರವ
ಸದಾಶಿವಮೂರ್ತಿಲಿಂಗಕ್ಕೆ ಅರ್ಪಿತವ ಮಾಡು.