Index   ವಚನ - 161    Search  
 
ಹುತ್ತದೊಳಗಳ ಹಾವು ಹದ್ದಿನ ಹೊಟ್ಟೆಯೊಳಗಳ ತತ್ತಿ ನುಂಗಿತ್ತು. ಗಿಡುಗನ ಉಡು ನುಂಗಿ, ಹೊಡೆವವನ ದಡಿ ನುಂಗಿತ್ತು. ಹಾವನು ಹದ್ದಿನ ತತ್ತಿಯ, ಗಿಡುಗನ ಉಡುವ, ಹೊಡೆವವನ ಡೊಣ್ಣೆಯ ಬಾಯಿಲ್ಲದ ಇರುಹೆ ನುಂಗಿತ್ತು ಕಂಡೆ. ಸದಾಶಿವಮೂರ್ತಿಲಿಂಗವು ಬಚ್ಚಬಯಲಾಯಿತ್ತು.