Index   ವಚನ - 181    Search  
 
ಶೈವಕ್ಕೆ ಕೈಲಾಸ, ವೈಷ್ಣವಕ್ಕೆ ವೈಕುಂಠ, ಬೌದ್ಧಂಗೆ ಮೋಕ್ಷಗಾಮಿನಿಯೆಂಬ ಗೊತ್ತುಗಳು ಬೇರಾದಲ್ಲಿ, ಪೃಥ್ವಿ ಅಪ್ಪು ತೇಜ ವಾಯು ಆಕಾಶ ಬೇರಾದುದಿಲ್ಲ. ಸುವರ್ಣ ಒಂದು ಆಭರಣ ಹಲವಾದಂತೆ. ಪರಬ್ರಹ್ಮವಸ್ತುವೊಂದೆಂಬುದಕ್ಕೆ ಇದೆ ದೃಷ್ಟ. ಮತ್ತಿದಿರು ದೈವವುಂಟೆಂದು ಗದಿಯಬೇಡ. ನೆರೆ ನಂಬಿ, ಸದಾಶಿವಮೂರ್ತಿಲಿಂಗವಲ್ಲದಿಲ್ಲಾಯೆಂದೆ.