Index   ವಚನ - 218    Search  
 
ಶರೀರದಲ್ಲಿ ಷಡಾಧಾರಚಕ್ರವುಂಟೆಂಬರು. ಆಧಾರವೊಂದರಿಂದ ಆದುದನರಿಯದೆ ಆರುಂಟೆಂದು ಬೇರೆ ಕಲ್ಪಿಸಬಹುದೆ? ಅದಕ್ಕೆ ದೃಷ್ಟ: ಹುತ್ತದ ಬಾಯಿ ಹಲವಾದಡೆ ಒಡಲೊಂದೆ ಘಟಭೇದ. ಆಧಾರ ನಾನೆಂಬುದನರಿತಲ್ಲಿ ಷಡಾಧಾರ ನಿಂದಿತ್ತು. ಅದು ತನ್ನಯ ಚಿತ್ತದ ಭೇದವಲ್ಲದೆ ವಸ್ತುವನರಿವ ಭೇದವಲ್ಲ. ಹಲವು ಓಹರಿಯಲ್ಲಿ ತಿಳಿದು ನೋಡುವ ಒಬ್ಬನೆ ಮನೆಯೊಡೆಯ. ಆ ಹೊಲಬನರಿತಲ್ಲಿಯೆ ನಿಂದುದು, ಸದಾಶಿವಮೂರ್ತಿಲಿಂಗದ ಅಂಗ.